ರಾಜ್ಯ

ಡಿಸಿ,ಎಸ್‌ಪಿಗಳ ಜೊತೆ ಮಹತ್ವದ ಸಭೆ : ಮುಖ್ಯಮಂತ್ರಿ ನೀಡಿದ ಸೂಚನೆ ಹೀಗಿವೆ…

ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು. ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಎಚ್ಚರಿಸಿದರು.

ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ.

ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

43 mins ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

57 mins ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

2 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

2 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago