ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ : ಡಿಕೆಶಿ ಆಪ್ತ ಇನಾಯತ್ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಪೂರ್ಣ ಅವಧಿಯಲ್ಲಿ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆಯ ಮಾತಿಲ್ಲ ಎಂದರು.
ಹೈಕಮಾಂಡ್ ಹಲವಾರು ವಿಚಾರಗಳಿಗೆ ಕರೆಯುತ್ತಾರೆ ಹೋಗಿ ಮಾತನಾಡಿಕೊಂಡು ಬರುತ್ತಾರೆ. ಆ ರೀತಿ ಆಗಬಹುದು ಈ ರೀತಿ ಆಗಬಹುದು ಅನ್ನೋದು ಈಗಲೇ ಯಾಕೆ ಎಂದು ಪ್ರಶ್ನಿಸಿದರು. ಡಿಸಿಎಂ ಶಿವಕುಮಾರ್ ನಾನು ಮುಖ್ಯಮಂತ್ರಿ ಆಗಬೇಕು ಎಂದು ಕೇಳಿದ್ದರು. ಹಾಗಾಗಿ ಗೊಂದಲ ಇತ್ತು ಹೈಕಮಾಂಡ್ ಸ್ಪಷ್ಟನೆ ಕೊಟ್ಟಿದೆ ಎಂದಿದ್ದಾರೆ.





