ರಾಜ್ಯ

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು: ಸಿಎಂಗೆ ನೈತಿಕ ಹೊಣೆಯಿಲ್ಲವೇ ಎಂದ ಬಿವೈ ವಿಜಯೇಂದ್ರ

ಬೆಂಗಳೂರು: ಮೈಸೂರಿನಲ್ಲಿರುವ ಪ್ರಮುಖ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವಾಗಲೇ ತಮ್ಮ ಹೆಸರು ರಸ್ತೆಗೆ ಇಡಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ರಸ್ತೆಗೆ ಇಡಲು ನಿರ್ಧರಿಸುವ ಮೂಲಕ ತುಘಲಕ್‌ ಆಡಳಿತ ನೆನಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಮೈಸೂರು ಸಂಸ್ಥಾನವನ್ನು ರಾಜರು ಕಟ್ಟಿ ಬೆಳೆಸಿದ್ದಾರೆ. ರಾಜವಂಶದ ಹೆಸರು ಇರುವ ರಸ್ತೆಗೆ ಮುಖ್ಯಮಂತ್ರಿ ತಮ್ಮ ಹೆಸರಿಡುತ್ತಿರುವುದು ಸರ್ವಾಧಿಕಾರದ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಚುನಾಯಿತ ಪ್ರತಿನಿಧಿಗಳಿಲ್ಲದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಎಷ್ಟು ಸರಿ ಎಂದರು.

ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಅವರ ಸಲಹೆಯ ಮೇರೆಗೆ ಮೈಸೂರು ಮಹಾನಗರ ಪಾಲಿಕೆಯು, ಕೆಆರ್‌ಎಸ್‌ ರಸ್ತೆಯ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯಲ್‌ ಜಂಕ್ಷನ್‌ವರೆಗೆ ರಸ್ತೆಗೆ ʼಸಿದ್ದರಾಮಯ್ಯ ಆರೋಗ್ಯ ಮಾರ್ಗʼ ಎಂದು ಹೆಸರಿಡುವ ಪ್ರಸ್ತಾವನೆ ಯನ್ನು ಡಿ.13ರಂದು ಪತ್ರಿಕೆಗಳಲ್ಲಿ ಪ್ರಕಟಿಸಿದ್ದರು. ಈ ಕುರಿತು ಡಿ.30ರೊಳಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ಕೇಳಲು ನಿರ್ಧರಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

6 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

13 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

47 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

1 hour ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

1 hour ago

ದಕ್ಷಿಣ ಕಾಶಿಯ ಪಂಚ ಮಹಾರಥೋತ್ಸವಕ್ಕೆ ಭಾರಿ ಸಿದ್ಧತೆ

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…

2 hours ago