ಬೆಂಗಳೂರು : ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ ಮತ್ತುಇಡಿ ವಾಲ್ಮೀಕಿ ನಿಗಮ ಹಗರಣವನ್ನು ತನಿಖೆ ನಡೆಸುತ್ತಿರುವುದನ್ನ ಮತ್ತು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರು ನಾಗೇಂದ್ರ ಮೇಲೆ ತನಿಖಾಧಿಕಾರಿಗಳು ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿ ಸಿದ್ದರಾಮಯ್ಯ ಸರ್ಕಾರ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಈ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಎಚ್ ಡಿಕೆ, ಯಾವನೋ ಒಬ್ಬ ಎಂಡಿ ಕೈಯಲ್ಲಿ ಇಡಿ ವಿರುದ್ಧ ದೂರು ಕೊಡಿಸಿ FIR ಮಾಡಿಸಿದ್ದಾರೆ. ಸರ್ಕಾರದ ಕ್ರಿಮಿನಲ್ ಮೈಂಡ್ ಸೆಟ್ ತನಗೆ ಎಲ್ಲರಿಗಿಂತ ಚೆನ್ನಾಗಿ ಗೊತ್ತಿದೆ. ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಖಂಡಿತ ಇಲ್ಲ. ದೇವೇಗೌಡರ ಕುಟುಂಬ ನಾಶ ಮಾಡುವುದಕ್ಕೋಸ್ಕರ ವಕೀಲ ದೇವರಾಜೇಗೌಡ ನಿರಾಕರಿಸಿದಾಗ ಅವರ ವಿರುದ್ಧ ಸುಳ್ಳು ಕೇಸ್ ಹಾಕಿಸಿ ಅರೆಸ್ಟ್ ಮಾಡಿಸಿದ್ದು, ಎಲ್ಲಾ ಗೊತ್ತಿದೆ. ಇಂಥ ಸರ್ಕಾರಕ್ಕೆ ಅಧಿಕಾರ ದುರುಪಯೋಗದ ಬಗ್ಗೆ ಧರಣಿ ನಡೆಸುವ ನೈತಿಕತೆ ಇದೆಯೇ ಎಂದು ಖಾರವಾಗಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…