ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಬೇಕು ಎಂಬ ಮನವಿ ಈ ಹಿಂದಿನಿಂದಲೂ ಕೇಳಿಬರುತ್ತಿತ್ತು. ಈ ಬೇಡಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಿಸಿ ಬೇಡಿಕೆ ಈಡೇರಿಸಿದ್ದ ಸಿದ್ದರಾಮಯ್ಯ ಇದೀಗ ಅಧಿಕೃತವಾಗಿ ಆದೇಶಕ್ಕೆ ಮುದ್ರೆ ಒತ್ತಿದ್ದಾರೆ.