ಬೆಂಗಳೂರು: ಎಸಿಬಿ ರಚನೆ ಮತ್ತು ಅರ್ಕಾವತಿ ಡಿನೋಟಿಫಿಕೇಷನ್ ಕುರಿತು ಸದನದಲ್ಲಿ ತಮ್ಮ ಮೇಲೆ ಆರೋಪ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ೮೫೨ ಎಕರೆ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಯಾವುದೇ ದಾಖಲೆ ಇಲ್ಲದೆ ಬೊಮ್ಮಾಯಿ ಆರೋಪ ಮಾಡಿದ್ದಾರೆ. ೨೦೦೩ರಲ್ಲಿ ಅರ್ಕಾವತಿ ಬಡವಾಣೆ ನಿರ್ಮಾಣವಾಗಿತ್ತು ೧೯೧೯ ಎಕರೆ ೧೩ ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣವಾಗಿತ್ತು ಅರ್ಕಾವತಿ ಬಡವಾಣೆ ಡಿನೋಟಿಫಿಕೇಷನ್ ಮಾಡಿದ್ದರು. ಡಿನೋಟಿಫಿಕೇಷನ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಆದೇಶದ ಮೇಲೆ ಕಮಿಟಿ ರಚನೆ ಮಾಡಲಾಗಿತ್ತು. ನಾವು ಅಧಿಕಾರ ಬರುವ ಮುನ್ನವೇ ಇದೆಲ್ಲ ನಡೆದಿತ್ತು ಎಂದರು.
ಆಗ ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಫೈಲ್ ಹೋಗಿತ್ತು. ನೀತಿ ಸಂಹಿತಿ ಹಿನ್ನೆಲೆಯಲ್ಲಿ ಫೈಲ್ ವಾಪಸ್ ಕಳುಹಿಸಿದ್ದರು ನಾನು ಅಧಿಕಾರಕ್ಕೆ ಬಂದ ನಂತರ ನನ್ನ ಬಳಿಗೆ ಫೈಲ್ ಬಂದಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಮರುಪರಿಶೀಲನೆ ಮಾಡಿದ್ದಾರೆ. ವರದಿ ನ್ಯಾಯಯುತವಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು. ಅಧಿಕಾರಿಗಳ ಮಾಹಿತಿ ಮೇರೆಗೆ ಫೈಲ್ ಮೇಲೆ ನಾನು ಅನುಮೋದಿಸಲಾಗಿದೆ ಎಂದು ಕನ್ನಡದಲ್ಲಿ ಬರೆದಿದ್ದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು. ನಾನು ಅಧಿಕಾರಕ್ಕೆ ಬರುವ ಮುನ್ನ ಅರ್ಕಾವತಿ ಡಿನೋಟಿಫೈ ಆಗಿತ್ತು. ನಾನು ಯಾವುದೇ ಡಿನೋಟಿಫಿಕೇಷನ್ ಮಾಡಿರಲಿಲ್ಲ. ವಿಧಾನಸಭೆಯಲ್ಲಿ ಗುರುವಾರ ಬೊಮ್ಮಾಯಿ ತಪ್ಪು ಮಾಹಿತಿ ನೀಡಿದ್ದಾರೆ. ಪಿಎಸ್ಐ ಹಗರಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕಿಕೊಳ್ಳಲು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ದ ಸಿಎಂ ಬಿಜೆಪಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಬಸವರಾಜ ಬೊಮ್ಮಾಯಿ ಅವರು ಕೆಲವು ವಿಚಾರಗಳ ಬಗ್ಗೆ ವೀರಾವೇಶದಿಂದ ಉತ್ತರ ಕೊಟ್ಟಿದ್ದಾರೆ. ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಎಸಿಬಿ ರಚನೆ ಮಾಡಿ, ಲೋಕಾಯುಕ್ತ ಸಂಸ್ಥೆ ಮುಚ್ಚಿದ್ದಾರೆಂದು ಆರೋಪ ಮಾಡಿದ್ದಾರೆ. ಸಿಎಂ ಆಗಿರುವವರಿಗೆ ಕಾನೂನು ಜ್ಞಾನ ಇದೆ ಅಂದುಕೊಂಡಿದ್ದೀನಿ ದೇಶದ ೧೬ ರಾಜ್ಯಗಳಲ್ಲಿ ಎಸಿಬಿ ಮತ್ತು ಲೋಕಾಯುಕ್ತ ಎರಡೂ ಇವೆ ಎಂದು ಹೇಳಿದರು. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲೂ ಎಸಿಬಿ ಇದೆ.
– ಸಿದ್ದರಾಮಯ್ಯ, ವಿಧಾನಸಭೆ ವಿಪಕ್ಷ ನಾಯಕರು.