ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕುಟವೊಂದು ಸೇರ್ಪಡೆಯಾಗಲಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಐತಿಹಾಸಿಕ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ ನಾಳೆ ಲೋಕಾರ್ಪಣೆಯಾಗಲಿದೆ.
ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ-ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸಿದ್ದರು.
ಹೀಗಾಗಿ 2019ರಲ್ಲಿ ಕೇಬಲ್ ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ ವೆಚ್ಚದ ಕಾಮಗಾರಿಯನ್ನು ಉದ್ಘಾಟನೆ ಮಾಡಿದ್ದರು.
2020ರ ಡಿಸೆಂಬರ್‌ನಲ್ಲಿ ಪ್ರಾರಂಭಗೊಂಡಿದ್ದ ಕಾಮಗಾರಿಯು ಅಂತ್ಯಗೊಂಡಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಈ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಸೇತುವೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಹಾಗೂ ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸಲಿದೆ. 2.24 ಕಿ.ಮೀ ಉದ್ದದ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ ಆಧಾರಿತ ಸೇತುವೆ ಇದಾಗಿದೆ.





