Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಬೆಳಕಿಗೆ : ೯ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ.

ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ , ಸಹಕಾರಿ ಸಂಘ, ಕೋ ಆಪರೇಟಿವ್‌ ಸೊಸೈಟಿಗಳಿಗೆ ಬಿಬಿಎಂಪಿ ಕಲ್ಯಾಣ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧವಾಗಿ ೯ ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.

ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಿ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಇನ್ನು ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ.

Tags: