ರಾಜ್ಯ

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೋಮವಾರ ಅಂತ್ಯವಾಗಿದೆ. ರಾಜ್ಯದಾದ್ಯಂತ ಒಟ್ಟು 5,54,32,314 ಎನ್ಯುಮರೇಷನ್ ಫಾರಂಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳ 100% ಡಿಜಿಟಲೀಕರಣ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ 1,8,34,595 ಮಂದಿ ಎಸ್‌ಡಿಡಿಒ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಮುಂದಿನ ಹಂತವಾಗಿ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿಗೆ ಸಂಬಂಽಸಿದಂತೆ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಹಾಗೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಾರ್ವಜನಿಕರಿಂದ ಸ್ವೀಕರಿಸುವ ಆಕ್ಷೇಪಣೆ ಮತ್ತು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.

ಹೀಗಾಗಿ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿ, ಯಾವುದೇ ಲೋಪ ಅಥವಾ ಆಕ್ಷೇಪಣೆ ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಮತದಾರರಿಗೆ ಸೂಚಿಸಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

14 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

14 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

20 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

20 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

21 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

21 hours ago