ರಾಜ್ಯ

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದಲ್ಲೂ ಇದು ತುರ್ತಾಗಿ ನಡೆಯುವ ಅಗತ್ಯವಿದೆ ಎಂದು ಹೇಳಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್ಐಆರ್ ಬಂದರೆ ನಿಜವಾದ ಮತದಾರರು ಯಾರು, ಅವರು ಎಲ್ಲಿಂದ ಬಂದವರು, ಅವರ ಹಿನ್ನೆಲೆ ಏನು ಎಂಬುದು ಸೇರಿದಂತೆ ಎಲ್ಲಾ ವಿವರಗಳೂ ಲಭ್ಯವಾಗುತ್ತವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಆದಷ್ಟು ಶೀಘ್ರ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದರು.

ರಾಜಧಾನಿ ಬೆಂಗಳೂರಿಗೆ ಹೊರ ರಾಜ್ಯಗಳು ಹಾಗೂ ಬೇರೆ ದೇಶಗಳಿಂದ ಬಂದು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ಪಡೆದುಕೊಂಡಿರುವವರನ್ನು ತಕ್ಷಣವೇ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ‌

ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬಂದು ನಗರದ ಅನೇಕ ಕಡೆ ನೆಲೆಸಿದ್ದಾರೆ. ಕೆಲವು ಕಡೆ ರೋಹಿಂಗ್ಯಾಗಳು ಕೂಡ ಇದ್ದಾರೆ. ಅವರನ್ನು ಪತ್ತೆ ಮಾಡಿ ಇವರ ಬಳಿ ಇರುವ ಗುರುತಿನ ಚೀಟಿಗಳನ್ನು ವಿಚಾರಣೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ಹೊರದೇಶಗಳು ಮತ್ತು ಬೇರೆ ರಾಜ್ಯಗಳಿಂದ ಬಂದವರಿಗೆ ಕೆಲವರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿ ಕೊಟ್ಟಿದ್ದಾರೆ. ಇದು ದುರುಪಯೋಗವಾಗುವ ಸಾಧ್ಯತೆ ಇದೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತರು ತಕ್ಷಣವೇ ಪರಿಶೀಲಿಸಿ ವಶಕ್ಕೆ ಪಡೆಯಬೇಕೆಂದು ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

4 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

5 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

5 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

6 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

7 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

8 hours ago