ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣರವರ ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇರೆಗೆ ಶಾಸಕ ಎಚ್.ಡಿ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣನನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು, ವಿಚಾರಣೆಗೆ ಕರೆದೊಯ್ಯುತ್ತಿದ್ದಾರೆ.
ಮನೆಕೆಲಸ ಮಹಿಳೆಯ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿತ್ತು, ಈ ಸಂತ್ರಸ್ತೆಯನ್ನು ರೇವಣ್ಣ ಹಾಗೂ ಸಹಚರರು ಅಪಹರಣ ಮಾಡಿದ್ದರು. ಇದೇ ಕಾರಣಕ್ಕೆ ರೇವಣ್ಣರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಬಂಧನದ ಕಾನೂನು ಪ್ರಕ್ರಿಯೆ ನಡೆಸಲಾಗುವುದು ಎಂದು ಎಸ್‌ಐಟಿ ತಿಳಿಸಿವೆ.
ಆರೋಪಿಯನ್ನು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಬೇಕು. ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎಂದು ಎಸ್‌ಐಟಿ ಮೂಲ ಹೇಳಿವೆ.