Mysore
21
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ಮಾಸ್ಕ್‌ ಮ್ಯಾನ್‌ ಅರೆಸ್ಟ್‌

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್‌ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

ಬಳಿಕ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಲಿದ್ದು, ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಆರೋಪದಂತೆ ಎಸ್‌ಐಟಿ ಅಧಿಕಾರಿಗಳು ಆತ ತೋರಿಸಿದ ಸ್ಥಳಗಳನ್ನು ಅಗೆದು ಶೋಧ ಕಾರ್ಯ ನಡೆಸಿದ್ದರು. ಎರಡು ಸ್ಥಳಗಳಲ್ಲಿ ಒಂದೆಡೆ ಅಸ್ಥಿಪಂಜರ ಸಿಕ್ಕಿದ್ದರೆ, ಮತ್ತೊಂದು ಜಾಗದಲ್ಲಿ ಮಾನವನ ಮೂಳೆಗಳು ಸಿಕ್ಕಿದ್ದವು.

ಬಳಿಕ ಎಸ್‌ಐಟಿ ಅಧಿಕಾರಿಗಳು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸಿದ್ದರು. ನಂತರ ಮಾಸ್ಕ್‌ ಮ್ಯಾನ್‌ನನ್ನು ವಿಚಾರಗಣೆಗೆ ಒಳಪಡಿಸಲಾಗಿತ್ತು. ಈ ಮಧ್ಯೆ ಧರ್ಮಸ್ಥಳದಲ್ಲಿ ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಮಂಡ್ಯದ ವ್ಯಕ್ತಿ ಮಾಹಿತಿ ಬಿಚ್ಚಿಟ್ಟಿದ್ದರು. ದೂರುದಾರು ಚಿನ್ನಯ್ಯ ಹೇಳುತ್ತಿರುವುದೆಲ್ಲಾ ಸುಳ್ಳು ಎಂದು ಹೇಳಿದ್ದರು.

Tags:
error: Content is protected !!