ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.
ಬಳಿಕ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಲಿದ್ದು, ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪದಂತೆ ಎಸ್‌ಐಟಿ ಅಧಿಕಾರಿಗಳು ಆತ ತೋರಿಸಿದ ಸ್ಥಳಗಳನ್ನು ಅಗೆದು ಶೋಧ ಕಾರ್ಯ ನಡೆಸಿದ್ದರು. ಎರಡು ಸ್ಥಳಗಳಲ್ಲಿ ಒಂದೆಡೆ ಅಸ್ಥಿಪಂಜರ ಸಿಕ್ಕಿದ್ದರೆ, ಮತ್ತೊಂದು ಜಾಗದಲ್ಲಿ ಮಾನವನ ಮೂಳೆಗಳು ಸಿಕ್ಕಿದ್ದವು.
ಬಳಿಕ ಎಸ್‌ಐಟಿ ಅಧಿಕಾರಿಗಳು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸಿದ್ದರು. ನಂತರ ಮಾಸ್ಕ್ ಮ್ಯಾನ್‌ನನ್ನು ವಿಚಾರಗಣೆಗೆ ಒಳಪಡಿಸಲಾಗಿತ್ತು. ಈ ಮಧ್ಯೆ ಧರ್ಮಸ್ಥಳದಲ್ಲಿ ಮಾಸ್ಕ್‌ಮ್ಯಾನ್ ಜೊತೆ ಕೆಲಸ ಮಾಡಿದ್ದ ಮಂಡ್ಯದ ವ್ಯಕ್ತಿ ಮಾಹಿತಿ ಬಿಚ್ಚಿಟ್ಟಿದ್ದರು. ದೂರುದಾರು ಚಿನ್ನಯ್ಯ ಹೇಳುತ್ತಿರುವುದೆಲ್ಲಾ ಸುಳ್ಳು ಎಂದು ಹೇಳಿದ್ದರು.
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್…