Mysore
26
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ ಎಸ್‌ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಎಸ್‌ಐಟಿ ರಾಜ್ಯಪಾಲರ ಅನುಮತಿ ಕೇಳಿದೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕೇಸ್‌ನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಎಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಈ ಹಿಂದೆಯೇ ರಾಜ್ಯಪಾಲರ ಬಳಿ ಅನುಮತಿ ಕೇಳಲಾಗಿತ್ತು. ದೋಷಾರೋಪ ಪಟ್ಟಿಯನ್ನು ಇಂಗ್ಲೀಷ್‌ಗೆ ತರ್ಜುಮೆ ಮಾಡಲು ರಾಜ್ಯಪಾಲರು ಸೂಚನೆ ನೀಡಿದರು. ಅದರಂತೆ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ತರ್ಜುಮೆ ಮಾಡಲಾಗಿದೆ.

ಸುಮಾರು 4500 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.

Tags:
error: Content is protected !!