ರಾಜ್ಯ

ಬಿಜೆಪಿ ಶಾಸಕ ಮುನಿರತ್ನ ನಿವಾಸ, ಕಚೇರಿ ಪರಿಶೀಲಿಸಿದ ಎಸ್‌ಐಟಿ

ಬೆಂಗಳೂರು: ಅತ್ಯಾಚಾರದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಅವರ ಬೆಂಗಳೂರಿನ ವೈಯಾಲಿಕಾವಲ್‌ ನಿವಾಸ ಹಾಗೂ ಕಚೇರಿ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಎಸಿಪಿ ಅಧಿಕಾರಿ ಕವಿತಾ ನೇತೃತ್ವದಲ್ಲಿ ಇಂದು ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಶಾಸಕ ಮುನಿರತ್ನ ಅವರನ್ನು ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಲ್ಲಿ ಬಂಧಿಸಲಾಗಿತ್ತು. ಇದೀಗ ಅವರು ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ ಅಧಿಕಾರಿಗಳು ನಿರ್ಧರಿಸಿದ್ದು, ವೈಯಾಲಿಕಾವಲ್‌ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಫ್‌ಎಸ್‌ಎಲ್‌ ತಂಡದೊಂದಿಗೆ ದಾಳಿ ನಡೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

15 mins ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

45 mins ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

1 hour ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

1 hour ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

2 hours ago

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

3 hours ago