Mysore
22
mist

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ವೀಡಿಯೋ ಪ್ರಕರಣ : ಎಸ್‌ಐಟಿ ತನಿಖೆಗೆ ಸರ್ಕಾರ ಆದೇಶ !

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags: