Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಲೈಂಗಿಕ ದೌರ್ಜನ್ಯ, ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪಿಸಿದ ಎಸ್‌ಐಟಿ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.

ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು, 6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!