ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆಯಲ್ಲಿರುವ ನಿವಾಸಕ್ಕೆ ಎಸ್‌ಐಟಿ ಇಂದು ದಾಳಿ ನಡೆಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದ್ದು, ಅದನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಮಾಹಿತಿ ಪ್ರಕಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಸಿಸಿಟಿವಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ದೂರುದಾರ ಚಿನ್ನಯ್ಯ ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಂಗಿದ್ದನು. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಎಸ್‌ಐಟಿ ಶೋಧ ನಡೆಸಿದೆ. ಚಿನ್ನಯ್ಯ ತಂಗಿದ್ದ ರೂಂನಲ್ಲಿ ಎಸ್‌ಐಟಿ ತೀವ್ರ ಶೋಧ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





