ರಾಜ್ಯ

ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ: ಹಲವು ದಾಖಲೆಗಳು ವಶಕ್ಕೆ

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಮೊಬೈಲ್‌ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆಯಲ್ಲಿರುವ ನಿವಾಸಕ್ಕೆ ಎಸ್‌ಐಟಿ ಇಂದು ದಾಳಿ ನಡೆಸಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್‌ ಪತ್ತೆಯಾಗಿದ್ದು, ಅದನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಸಿಸಿಟಿವಿ ಹಾರ್ಡ್‌ ಡಿಸ್ಕ್‌ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ದೂರುದಾರ ಚಿನ್ನಯ್ಯ ಈ ಹಿಂದೆ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ತಂಗಿದ್ದನು. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಎಸ್‌ಐಟಿ ಶೋಧ ನಡೆಸಿದೆ. ಚಿನ್ನಯ್ಯ ತಂಗಿದ್ದ ರೂಂನಲ್ಲಿ ಎಸ್‌ಐಟಿ ತೀವ್ರ ಶೋಧ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago