ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲಾಗಿದೆ.
ಮೈಸೂರು ಮೂಲದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದು, ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ಖಾಸಗಿ ದೂರು ದಾಖಲಾಗಿದ್ದು, ನ್ಯಾಯಮೂರ್ತಿ ಅವರು ಶುಕ್ರವಾರ ಅಥವಾ ಶನಿವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.
ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.