ಬೆಂಗಳೂರು : ಕೇಂದ್ರದ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ ‘ ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ ( ಶ್ರೀಮಂತರ ಪೋಷಣೆ ಬಡವರ ವಿನಾಶ)ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಸಚಿವ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಬಜೆಟನ್ನು ಮಂಡಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ. ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇ 54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುತ್ತಾರೆ.
2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿಯಷ್ಟು ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ದೂರಿದರು.
ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿನ ಅನ್ಯಾಯ, ಅವೈಜ್ಞಾನಿಕ ಬೆಳೆ ವಿಮೆ, ಸಾಲದ ಹೊರೆ, ನೆರೆ ಮತ್ತು ಬರಪರಿಹಾರದಲ್ಲಿನ ಕೊರತೆಗಳ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ.ರೈತರ ಆದಾಯವನ್ನು ದುಪ್ಪಟ್ಟು ಮಾಡಲಾಗುವುದು ಎಂಬ ಘೋಷಣೆ ಪೊಳ್ಳಾಗಿದೆ ಎಂದು ಹೇಳಿದರು.
“ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ. ಈ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವದನ್ನೂ ಸ್ಪಷ್ಟಪಡಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪನಗರ ರೈಲ್ವೆ ಮತ್ತು ಮೆಟ್ರೋ ರೈಲು ಯೋಜನೆಗೆ ಹೆಚ್ಚಿನ ಅನುದಾನ ನೀಡಬಹುದೆಂಬ ನಿರೀಕ್ಷೆ ಇತ್ತು ಅದೂ ಸುಳ್ಳಾಗಿದೆ. ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿಮೆ ಮಾಡಲಾಗಿದೆ. 2022-23ರಲ್ಲಿ ರೂ.2,87,194 ಕೋಟಿಯಷ್ಟು ಆಹಾರ ಸಬ್ಸಿಡಿ ನೀಡಲಾಗಿತ್ತು. ಈ ಬಾರಿ ಅದನ್ನು ರೂ.1,97,350 ಕೋಟಿಗೆ ಇಳಿಸಲಾಗಿದೆ.
ನರೇಗಾ ಯೋಜನೆಗೆ ಶೇಕಡಾ 32ರಷ್ಟು ಕಡಿಮೆ ಅನುದಾನ ನಿಗದಿಪಡಿಸಲಾಗಿದೆ. 2022-23ರಲ್ಲಿ ರೂ.89, 154 ಕೋಟಿ ಗಳಷ್ಟು ನೀಡಲಾಗುತ್ತಿದ್ದ ಅನುದಾನವನ್ನು 2023-24ರ ಸಾಲಿನಲ್ಲಿ ರೂ.61,032 ಕೋಟಿಗೆ ಇಳಿಸಲಾಗಿದೆ.ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ
ರಾಜ್ಯ ಸರ್ಕಾರ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಸಂಪೂರ್ಣ ವಿಫಲವಾಗಿದೆ
ಎಂದರು.
ಸಾಮಾನ್ಯವಾಗಿ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಸಂಸತ್ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ರಾಜ್ಯದ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡುವುದು ರೂಢಿ. ಆದರೆ ಈ ಬಾರಿ ಈ ಸಂಪ್ರದಾಯವನ್ನು ಮುರಿಯಲಾಗಿದೆ.
ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿಯ 25 ಲೋಕಸಭಾ ಸದಸ್ಯರು ಮತ್ತು ಆರು ರಾಜ್ಯಸಭಾ ಸದಸ್ಯರಿದ್ದಾರೆ. ಇವರಲ್ಲಿ ಯಾರೋಬ್ಬರು ರಾಜ್ಯದ ಬೇಡಿಕೆಗಳ ಬಗ್ಗೆಯಾಗಲಿ, ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯಾಗಲಿ ಎಲ್ಲಿಯೂ ಸೊಲ್ಲೆತ್ತಿಲ್ಲ, ಇದರಿಂದಾಗಿ ಕೇಂದ್ರ ಸರ್ಕಾರ ಕೂಡಾ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಹೇಳಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದರೂ ಅವರು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಒಂದೆರಡು ಬಾರಿ ಕರ್ನಾಟಕದ ಹೆಸರನ್ನು ಉಲ್ಲೇಖ ಮಾಡಿದ ಹೊರತಾಗಿ ವಿಶೇಷ ನೆರವಿನ ಘೋಷಣೆಗಳನ್ನು ಮಾಡಿಲ್ಲ. ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ರಾಜ್ಯ ಸರ್ಕಾರ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಕೂಡಾ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ” ಎಂದು ಬಜೆಟ್ ವಿಶ್ಲೇಷಣೆ ಮಾಡಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ʼಶ್ರೀಮಂತರ ಪೋಷಣೆ ಬಡವರ ವಿನಾಶʼ ಎಂಬ ನೀತಿಯ ಮುಂದುವರಿದ ಭಾಗವೇ ಸೀತಾರಾಮನ್ ಮಂಡಿಸಿದ ಬಜೆಟ್ : ಸಿದ್ದರಾಮಯ್ಯ
Previous Articleನಂಜನಗೂಡು : ಮಗನ ಸಾವಿಗೆ ನ್ಯಾಯ ಕೋರಿ ದಂಪತಿ ಪ್ರತಿಭಟನೆ
Next Article ಪ್ರತಿಭಟನೆ ಹಿಂಪಡೆಯಲು ಸಮ್ಮತಿಸಿದ ಅಂಗನವಾಡಿ ಅಕ್ಕಂದಿರು