Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ ಆರು ಮಂದಿ ನಕ್ಸಲರು

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ಡಿಜಿಪಿ ಅಲೋಕ್‌ ಮೋಹನ್‌ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ಈ ವೇಳೆ ನಕ್ಸಲರ ಕುಟುಂಬಸ್ಥರು ಸಹ ಹಾಜರಿದ್ದರು.

ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹಾಗೂ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದ ಪ್ರಯತ್ನ ಈಗ ಯಶಸ್ವಿಯಾಗಿದ್ದು, ಆರು ಮಂದಿ ನಕ್ಸಲರು ಶರಣಾಗಿದ್ದಾರೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ.ವಸಂತ ಅಲಿಯಾಸ್‌ ರಮೇಶ್‌, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬುವವರೇ ಶರಣಾಗತರಾಗಿರುವ ನಕ್ಸಲರಾಗಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸಂಜೆ ಆರು ಗಂಟೆಯ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿತು. ಆ ತಂಡವನ್ನು ಚೆಕ್‌ ಇನ್‌ ಮಾಡಿ ಪೊಲೀಸರು ಒಳಗೆ ಬಿಟ್ಟರು. ಇನ್ನು ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಎಂ ಸಿದ್ದರಾಮಯ್ಯ ಕಚೇರಿ ಮುಂದೆ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು.

Tags: