ರಾಜ್ಯ

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ ಆರು ಮಂದಿ ನಕ್ಸಲರು

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ಡಿಜಿಪಿ ಅಲೋಕ್‌ ಮೋಹನ್‌ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ಈ ವೇಳೆ ನಕ್ಸಲರ ಕುಟುಂಬಸ್ಥರು ಸಹ ಹಾಜರಿದ್ದರು.

ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹಾಗೂ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದ ಪ್ರಯತ್ನ ಈಗ ಯಶಸ್ವಿಯಾಗಿದ್ದು, ಆರು ಮಂದಿ ನಕ್ಸಲರು ಶರಣಾಗಿದ್ದಾರೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ.ವಸಂತ ಅಲಿಯಾಸ್‌ ರಮೇಶ್‌, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬುವವರೇ ಶರಣಾಗತರಾಗಿರುವ ನಕ್ಸಲರಾಗಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸಂಜೆ ಆರು ಗಂಟೆಯ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿತು. ಆ ತಂಡವನ್ನು ಚೆಕ್‌ ಇನ್‌ ಮಾಡಿ ಪೊಲೀಸರು ಒಳಗೆ ಬಿಟ್ಟರು. ಇನ್ನು ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಎಂ ಸಿದ್ದರಾಮಯ್ಯ ಕಚೇರಿ ಮುಂದೆ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ ಹಳ್ಳ ಹಿಡಿಯುತ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕಮಿಷನ್‌ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಪ್ರಕರಣ ಹಳ್ಳ…

29 mins ago

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್‌ ನೇಮಕ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು…

58 mins ago

ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.…

2 hours ago

ಗಣಿಗಾರಿಕೆ ಮೇಲೆ ರಾಜ್ಯ ಸರ್ಕಾರದಿಂದ ಹೆಚ್ಚು ತೆರಿಗೆ: ಕೇಂದ್ರ ಕಾನೂನು ಸಚಿವರ ಜೊತೆ ಎಚ್‌ಡಿಕೆ ಸಭೆ

ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ…

2 hours ago

ರಾಜ್ಯಪಾಲರನ್ನು ಮದುವೆಗೆ ಆಮಂತ್ರಿಸಿದ ನಟ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿ ತಮ್ಮ…

2 hours ago

ತಿ.ನರಸೀಪುರ: ಮಹಿಳೆಯ ಶವಸಂಸ್ಕಾರಕ್ಕೆ ಅವಕಾಶ ಕೊಡದ ಸ್ಥಳೀಯರು

ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ…

3 hours ago