ಬೆಂಗಳೂರು: ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಡಿಯೋ ವೈರಲ್ ಆಗುತ್ತಿದ್ದಂತೆ ಸೋಮನ ಆಪ್ತೆ ಪುಷ್ಪಾ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರರವರ ಹತ್ಯೆಗೆ ಸುಫಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿ ಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಈ ಹಿನ್ನೆಲೆ ಕಳೆದ ನವೆಂಬರ್‌ನಲ್ಲಿ ರಾಜೇಂದ್ರ ಅವರ ಮಗಳ ಹುಟ್ಟುಹಬ್ಬದ ಡೆಕೋರೇಷನ್‌ಗಾಗಿ ಇಬ್ಬರು ಯುವಕರು ಬಂದಿದ್ದರು. ಆ ಇಬ್ಬರು ಯುವಕರನ್ನು ಕಳುಹಿಸಿದ್ದು, ಆಗಲೇ ಹತ್ಯೆಗೆ ಪ್ರಯತ್ನ ನಡೆದಿತ್ತು ಎಂದು ಆಡಿಯೋದಲ್ಲಿ ಪುಷ್ಪಾ ಎಂಬಾಕೆ ಮಾಹಿತಿ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅಲ್ಲದೇ ಅವರ ಸೋಮ, ಭರತ್, ಗುಂಡ, ಯತೀಶ್ ಹಾಗೂ ಅಮಿತ್ ಎಂಬುವವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…