ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.
ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ.
ಮಕ್ಕಳು ಸೇರಿದಂತೆ ವಯಸ್ಕರಲ್ಲಿ ಫಂಗಲ್ ಇನ್ಫೆಕ್ಷನ್ ಹಾಗೂ ಚರ್ಮದ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಈ ಖಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು, ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳಿಗೆ ಸೋಂಕು ಜಾಸ್ತಿ ಕಾಣಿಸಿಕೊಳ್ಳುತ್ತಿದ್ದು, ಮನೆಯಲ್ಲಿ ಒಬ್ಬರಿಗೆ ಕಾಣಿಸಿಕೊಂಡರೆ ಮನೆಯ ಎಲ್ಲಾ ಸದಸ್ಯರಿಗೂ ಈ ಸೋಂಕು ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಜನತೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಇದು ಹೆಚ್ಚಾಗಿ ಚರ್ಮ ಒದ್ದೆಯಾಗುವುದು ಹಾಗೂ ಮಳೆಯಲ್ಲಿ ನೆನೆಯುವುದರಿಂದ ಕಂಡು ಬರುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಪೋಷಕರು ಮಕ್ಕಳಿಗೆ ಮಳೆಗಾಲ ಮುಗಿಯುವವರೆಗೂ ಕಾದಾರಿದ ಬಿಸಿ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.