ರಾಜ್ಯ

ಬೆಂಗಳೂರಿಗರಿಗೆ ಮತ್ತೊಂದು ಶಾಕ್:‌ ಮಕ್ಕಳಲ್ಲಿ ಹೆಚ್ಚುತ್ತಿದೆ ಚರ್ಮ ರೋಗ

ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ.

ಮಕ್ಕಳು ಸೇರಿದಂತೆ ವಯಸ್ಕರಲ್ಲಿ ಫಂಗಲ್‌ ಇನ್ಫೆಕ್ಷನ್ ಹಾಗೂ ಚರ್ಮದ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಈ ಖಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು, ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳಿಗೆ ಸೋಂಕು ಜಾಸ್ತಿ ಕಾಣಿಸಿಕೊಳ್ಳುತ್ತಿದ್ದು, ಮನೆಯಲ್ಲಿ ಒಬ್ಬರಿಗೆ ಕಾಣಿಸಿಕೊಂಡರೆ ಮನೆಯ ಎಲ್ಲಾ ಸದಸ್ಯರಿಗೂ ಈ ಸೋಂಕು ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಜನತೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಇದು ಹೆಚ್ಚಾಗಿ ಚರ್ಮ ಒದ್ದೆಯಾಗುವುದು ಹಾಗೂ ಮಳೆಯಲ್ಲಿ ನೆನೆಯುವುದರಿಂದ ಕಂಡು ಬರುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಪೋಷಕರು ಮಕ್ಕಳಿಗೆ ಮಳೆಗಾಲ ಮುಗಿಯುವವರೆಗೂ ಕಾದಾರಿದ ಬಿಸಿ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago