ಬೆಂಗಳೂರು: ತೀವ್ರ ಅನಾರೋಗ್ಯದ ಕಾರಣದಿಂದಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನಲೆ ನಗರದ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಎರಡು-ಮೂರು ದಿನಗಳಲ್ಲಿ ಮನೆಗೆ ವಾಪಾಸಾಗಲಿದ್ದಾರೆ ಎಂದು ವರದಿ ಹೇಳಿದೆ.
ಇತ್ತೀಚೆಗೆ ತೀವ್ರ ಅನಾರೋಗ್ಯ ಕಾರಣದಿಂದಾಗಿ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಬಳಿಕ ಸುಧಾರಣೆ ಕಂಡಿತ್ತು. ಇದಾದ ಸ್ವಲ್ಪ ದಿನಗಳ ನಂತರ ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಪಾರ ಅಭಿಮಾನಿ ಬಳಗ ಪ್ರಾರ್ಥಿಸುತ್ತಿದ್ದಾರೆ.