Mysore
28
overcast clouds

Social Media

ಬುಧವಾರ, 15 ಜನವರಿ 2025
Light
Dark

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇನ್ನಿಲ್ಲ

 

ಬೆಂಗಳೂರು:ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: