ಬೆಂಗಳೂರು:ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.
ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…