Mysore
17
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್‌ ರಿಲೀಫ್‌

kj george

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್‌ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಸಚಿವ ಜಾರ್ಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್‌ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಅಶ್ವಥ್‌ ನಾರಾಯಣ್‌, ಎಸ್.ಆರ್‌.ವಿಶ್ವನಾಥ್‌, ಧೀರಜ್‌ ಮುನಿರಾಜು ಅವರಿಗೆ ನೋಟಿಸ್‌ ನೀಡಿದೆ.

ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್.‌26ರಂದು ದಾವಣಗೆರೆ ರಾಜೇಶ್ವರಿ ಎಲೆಕ್ಟ್ರಿಕಲ್‌ ಸೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ. ನೇರವಾಗಿ ಟೆಂಡರ್‌ ನೀಡಲಾಗಿದ್ದು, ಇದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-2000, ಕರ್ನಾಟಕ ವಿದ್ಯುತ್‌ ನಿಯಂತ್ರಣ ಆರೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಭ್ರಷ್ಟಾಚಾರ ಆರೋಪ ಸಂಬಂಧ ಎಫ್‌ಐಆರ್‌ ದಾಖಲಿಸುವಂತೆ ಆದೇಶ ಹೊರಡಿಸಲಾಗಿತ್ತು.

Tags:
error: Content is protected !!