kj george
ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಸಚಿವ ಜಾರ್ಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಲೋಕಾಯುಕ್ತ ಎಸ್‌ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಅಶ್ವಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್ ನೀಡಿದೆ.
ಸ್ಮಾರ್ಟ್ ಮೀಟರ್ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್.26ರಂದು ದಾವಣಗೆರೆ ರಾಜೇಶ್ವರಿ ಎಲೆಕ್ಟ್ರಿಕಲ್ ಸೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ. ನೇರವಾಗಿ ಟೆಂಡರ್ ನೀಡಲಾಗಿದ್ದು, ಇದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-2000, ಕರ್ನಾಟಕ ವಿದ್ಯುತ್ ನಿಯಂತ್ರಣ ಆರೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಭ್ರಷ್ಟಾಚಾರ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವಂತೆ ಆದೇಶ ಹೊರಡಿಸಲಾಗಿತ್ತು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…