lakshmi hebbalkar opinion on caste census
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು.
ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…