ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ. ಈ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು ಸತ್ಯಕ್ಕೆ ಸಿಕ್ಕ ಜಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ತೀರ್ಪು ಹೊರಬೀಳುತ್ತಿದ್ದಂತೆ ಮಾಧ್ಯಮದವರ ಜತೆ ಮಾತನಾಡಿದ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನುಬದ್ಧ ಎಂದಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ಈ ಮೂಲಕ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ.