ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರಿಗೆ ಮೊದಲ ಕಂತಿನ ಗೌರವಧನ ತಲಾ 5 ಸಾವಿರ ರೂ. ಬಿಡುಗಡೆ ಮಾಡಿ ಆದೇಶಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ 1,20,728 ಸಮೀಕ್ಷಾದಾರರಿಗೆ ಮೊದಲ ಕಂತಿನಲ್ಲಿ ತಲಾ 5000 ರೂ.ನಂತೆ ಗೌರವಧನವನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಒಟ್ಟು 60,36,40,000 ರೂ.ಗಳನ್ನು ಸಮೀಕ್ಷಾ ಉದ್ದೇಶಕ್ಕಾಗಿ ನಿಗಮಗಳಿಂದ ಆಯೋಗದ ಖಾತೆಗೆ ವರ್ಗಾವಣೆಯಾಗಿರುವ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಹೆಸರಿನಲ್ಲಿರುವ ಪಿಡಿ ಖಾತೆ/ಬ್ಯಾಂಕ್ ಖಾತೆಗೆ ಹಲವು ನಿಬಂಧನೆಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಸಮೀಕ್ಷಾದಾರರಿಗೆ ತಲಾ 5 ಸಾವಿರ ರೂ.ನಂತೆ ಮೊದಲ ಕಂತಿನ ಗೌರವಧನ ನೀಡಲು ಬಳಸಬೇಕು. ಉಳಿದ ಅನುದಾನವನ್ನು ಮುಂದಿನ ಕಂತಿನಲ್ಲಿ ಬಿಡುಗಡೆ ಮಾಡಲಾಗುವುದು.
ಬಿಡುಗಡೆ ಮಾಡಲಾದ ಅನುದಾನ ಮತ್ತು ವೆಚ್ಚದ ವಿವರವನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ನಿಯಮಾನುಸಾರ ವೆಚ್ಚ ಮಾಡಿದ ನಂತರ ಹಣ ವಿನಿಯೋಗ ಪ್ರಮಾಣಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…