ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯದ ಎಲ್ಲ ಜನಸಂಖ್ಯೆಯನ್ನು ಒಳಗೊಳ್ಳುವುದೆಂದು ಸರ್ಕಾರ ಹೇಳಿದ್ದರೂ, ಇದರಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಸ್ಪಷ್ಟಪಡಿಸಿದೆ.
ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶದ ನೀಡಿದ ಬೆನ್ನಲ್ಲೇ ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ.
ಇದನ್ನೂ ಓದಿ:-ಚಾ.ನಗರ | ವಾರದಲ್ಲಿ ಜೀತವಿಮುಕ್ತರ ಸ್ಥಿತಿಗತಿ ವರದಿ ನೀಡಿಲು ಜಿಲ್ಲಾಧಿಕಾರಿ ತಾಕೀತು
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಆದೇಶದ ಅನುಸರಣೆಯ ಕುರಿತು ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ. ಸಮೀಕ್ಷೆ ಕುರಿತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಹಾಗೂ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಪಾಲನೆ ದೃಷ್ಟಿಯಿಂದ ಆಯೋಗದಿಂದ ಈ ಪ್ರಕಟಣೆ ಹೊರಬಿದ್ದಿದೆ.
ಪ್ರಕಟಣೆಯಲ್ಲಿ ಏನಿದೆ?
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.೨೨ರಿಂದ ಪ್ರಾರಂಭಿಸಿದ್ದು, ಪ್ರಗತಿಯಲ್ಲಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲವೆಂದು ಸ್ಪಷ್ಟಿಕರಿಸಲಾಗಿದೆಯೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಸಮೀಕ್ಷೆಯ ಸಮಯದಲ್ಲಿ ಜನರು, ಕುಟುಂಬಗಳು ಯಾವುದೇ ಮಾಹಿತಿಯನ್ನು ನೀಡಲು ಸಿಬ್ಬಂದಿ ಬಲವಂತಪಡಿಸುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…