Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು : ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ:-ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ
ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ ಸಮೀಕ್ಷೆ. ಜನರಿಗೆ ಪಂಗನಾಮ ಹಾಕುವ ಸಮೀಕ್ಷೆ. ಯಾರೂ ವೈಯಕ್ತಿಕ ದಾಖಲೆಗಳನ್ನು ನೀಡಬಾರದು. ಯಾವ್ಯಾವ ಪ್ರಶ್ನೆಗೆ ಉತ್ತರ ಕೊಡಬಹುದೋ ಅಷ್ಟನ್ನು ಮಾತ್ರ ನೀಡಿದರೆ ಸಾಕು. ಹೈಕೋರ್ಟ್ ಕೂಡ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ ಎಂದಿದೆ ಎಂದರು.
ಬೆಳಗಾವಿ, ರಾಯಚೂರು, ವಿಜಯಪುರ ಮೊದಲಾದ ಭಾಗಗಳಲ್ಲಿ ಪ್ರವಾಸ ಮಾಡಿ ಮಳೆ ಹಾನಿ ಪರಿಶೀಲನೆ ಮಾಡುತ್ತೇನೆ. ಹಿಂದೆ ಬಿಜೆಪಿ ಇದ್ದಾಗ ಜನರಿಗೆ ಉತ್ತಮ ಪರಿಹಾರ ನೀಡಲಾಗಿತ್ತು. ಈಗ ಕಾಂಗ್ರೆಸ್ ಏನೂ ನೀಡುತ್ತಿಲ್ಲ. ರೈತರಿಗೆ ಬೆಳೆ ಪರಿಹಾರ ನೀಡಿಲ್ಲ ಎಂದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…