Mysore
25
overcast clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಫೇಕ್‌ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪತ್ರಕರ್ತರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಬೇಕು. ಈ ಬಗ್ಗೆ ಪ್ರತಿ ಜಿಲ್ಲೆಗಳಿಗೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್‌ ನ್ಯೂಸ್‌ಗಳ ನಿಯಂತ್ರಣಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ಯಾಕ್ಟ್‌ ಚೆಕ್‌ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮ್ಮದ್‌, ವಿಧಾನಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಆರ್.ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:
error: Content is protected !!