ಬೆಂಗಳೂರು: ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಪತ್ರಕರ್ತರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಬೇಕು. ಈ ಬಗ್ಗೆ ಪ್ರತಿ ಜಿಲ್ಲೆಗಳಿಗೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.
ಫೇಕ್ ನ್ಯೂಸ್‌ಗಳ ನಿಯಂತ್ರಣಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…