ರಾಜ್ಯ

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಬಳಸುವುದನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಒಂದು ಕಡೆ ಕೇಂದ್ರ ಸರ್ಕಾರವು 16 ವರ್ಷಗಳ ವಯೋಮಿತಿಯ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆ ಮಾಡುವುದನ್ನು ನಿಷೇಧ ಮಾಡಲು ಸಂಸತ್ತಿನಲ್ಲಿ ಕಾಯ್ದೆ ಜಾರಿ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮತ್ತೊಂದು ಕಡೆ ಆಂಧ್ರಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆ ಮಾಡುವುದನ್ನು ನಿಷೇಧಿಸಲು ಹೊಸ ಐಟಿ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನ ಮಂಥನ ನಡೆಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಎನ್‌ಡಿಎ ಪ್ರಮುಖ ಮಿತ್ರಪಕ್ಷ ಟಿಡಿಪಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರಾದರೂ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸುವುದು ಅಥವಾ ನಿರ್ವಹಿಸುವುದನ್ನು ನಿಷೇಧಿಸುವ ರಾಷ್ಟ್ರವ್ಯಾಪಿ ಮಸೂದೆಯನ್ನು ಪ್ರಸ್ತಾಪಿಸಿದೆ.

ಪ್ರಸ್ತಾವಿತ ಶಾಸನವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಯಸ್ಸಿನ ಪರಿಶೀಲನೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸುತ್ತದೆ, ರಾಜ್ಯಗಳು ಆಸ್ಟ್ರೇಲಿಯಾದ ಇತ್ತೀಚಿನ ಇದೇ ರೀತಿಯ ಕ್ರಮಗಳನ್ನು ಉದಾಹರಣೆಯಾಗಿ ಉಲ್ಲೇಖಿಸುತ್ತವೆ.

ಈ ಬೆಳವಣಿಗೆಗಳ ನಡುವೆ ಕರ್ನಾಟಕದಲ್ಲಿ ಇನ್ನು ಮುಂದೆ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲ ಬಳಕೆಗೆ ನಿರ್ಬಂಧ ವಿಧಿಸುವ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರು ಈಗಾಗಲೇ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದರೆ ಹೊಸ ಕಾಯ್ದೆ ಶೀಘ್ರದಲ್ಲಿ ಜಾರಿಗೆ ಬರಲಿದೆ.

ಸಾಮಾಜಿಕ ಜಾಲತಾಣ ಬಳಕೆ ಮಾಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಕಡೆ ವ್ಯಾಸಂಗದ ಕಡೆ ಗಮನ ನೀಡದಿರುವುದು, ಏಕಾಗ್ರತೆ ಇಲ್ಲದಿರುವುದು ಫಲಿತಾಂಶದ ಮೇಲೆ ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾನಸಿಕ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

7 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

9 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

11 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

13 hours ago