ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್‌ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ಕೋರ್ಟ್ ಆದೇಶ ಹೊರಡಿಸಿದೆ.
ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಬಂಧನದಲ್ಲಿದ್ದ ಡ್ರೋನ್ ಪ್ರತಾಪ್ ಅವರ ಮೂರು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ಪೊಲೀಸರು ಮಧುಗಿರಿ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು.
ಬಳಿಕ ವಾದ ಆಲಿಸಿದ ನ್ಯಾಯಾಧೀಶರು, ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿರುವ ಫಾರಂಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆ ಮರೆಸಿಕೊಂಡಿದ್ದಾನೆ. ಅವನಿಗಾಗಿ ಹುಡುಕಾಟ ಮುಂದುವರಿದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ರಿಲೀಫ್ ಇಲ್ಲದಂತಾಗಿದ್ದು, ಈ ಬಾರಿ ಜೈಲು ಸಂಕಷ್ಟ ಬಹುತೇಕ ಫಿಕ್ಸ್ ಎಂದು ಹೇಳಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…