ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರೊಬ್ಬರು ನೀಡಿರುವ ಸೋಫಾ ಸೆಟ್ ಕುರಿತು ಕಾಲೆಳೆದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಚವರೊಬ್ಬರು ನೀಡಿರುವ ವಿದೇಶಿ ಸೋಫಾ ಸೆಟ್ ಇದಾಗಿದ್ದು, ಹ್ಯೂಬ್ಲೋಟ್ ವಾಚ್‌ನ ಅಪ್ಡೇಟ್ ವರ್ಷನ್ ಎಂದು ಕುಟುಕಿದ್ದಾರೆ.
ಸಚಿವರು ನೀಡಿದ ಸೋಫಾ ಸೆಟ್ ಸುಮಾರು 1 ಕೋಟಿ 90 ಲಕ್ಷ ರೂಪಾಯಿ ಬೆಲೆ ಬಾಳುವ ಗಿಫ್ಟ್ ಇದಾಗಿದೆ ಎಂದು ಎಚ್‌ಡಿಕೆ ದೂರಿದ್ದಾರೆ.
ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕದಲ್ಲಿ ಜಾರಿಗೆ ತಂದಿರುವ ಗ್ಯಾರೆಂಟಿಗಳ ಬಗ್ಗೆ ತೆಲಂಗಾಣ ವಿಧಾನಸಭಾ ಚುನಾವಣಾ ಭಾಷಣದಲ್ಲಿ ಪ್ರಸ್ತಾಪಿಸಿ ಸಿಎಂ ಅವಮಾನಕ್ಕೀಡಾಗಿದ್ದಾರೆ. ಗ್ಯಾರೆಂಟಿ ಯೋಜನೆಗಳು ರಾಜ್ಯದ ಜನರ ಜೀವ ತೆಗೆದಿದೆ, ಗ್ಯಾರೆಂಟಿ ಹೆಸರಲ್ಲಿ ಕಾಂಗ್ರೆಸ್ ಮೋಸ ಮಾಡುತ್ತಿದೆ. ತೆಲಂಗಾಣ ಸೇರಿದಂತೆ ಪಂಚ ರಾಜ್ಯದ ಜನರು ಇವುಗಳಿಗೆ ಮರುಳಾಗಬಾರದು ಎಂದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಮೊದಲು ಅವುಗಳನ್ನು ಭರ್ತಿ ಮಾಡಿ ಎಂದು ಸವಾಲು ಹಾಕಿದರು.
ರಾಜ್ಯದಲ್ಲೊಬ್ಬರು ಡುಪ್ಲಿಕೇಟ್ ಮಂತ್ರಿ ಇದ್ದಾರೆ ಅವರು ತೆಲಂಗಾಣಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳಿ ನಗೆಪಾಟಲಿಗೀಡಾಗಿದ್ದಾರೆ. ಗ್ಯಾರೆಂಟಿ ಎಂಬ ಸುಳ್ಳು ಭರವಸೆಗಳನ್ನು ಜನರಿಗೆ ನೀಡುತ್ತಾ ಕಿವಿಗೆ ಹೂವು ಮುಡಿಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…