Mysore
17
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಒಂದು ತಿಂಗಳೊಳಗೆ ಜನರ ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ನಗರದ ವಿಧಾನ ಸೌಧ ಮುಂಬಾಗ ಗುರುವಾರ ನಡೆದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆಗಳು ನೀಡಿದರು.

ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಡಿಸಿ (ಜಿಲ್ಲಾಧಿಕಾರಿ), ಸಿಇಒ (ಕಾರ್ಯ ನಿರ್ವಾಹಕಾಧಿಕಾರಿ) ಗಳ ಮೇಲೆ ಈ ಜವಾಬ್ದಾರಿ ಹೆಚ್ಚಿದೆ ಎಂದು ಸಿಎಂ ಸೂಚಿಸಿದರು.

ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ, ಅಹವಾಲು ಪರಿಹರಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ