ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನಗರದ ವಿಧಾನ ಸೌಧ ಮುಂಬಾಗ ಗುರುವಾರ ನಡೆದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆಗಳು ನೀಡಿದರು.
ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಡಿಸಿ (ಜಿಲ್ಲಾಧಿಕಾರಿ), ಸಿಇಒ (ಕಾರ್ಯ ನಿರ್ವಾಹಕಾಧಿಕಾರಿ) ಗಳ ಮೇಲೆ ಈ ಜವಾಬ್ದಾರಿ ಹೆಚ್ಚಿದೆ ಎಂದು ಸಿಎಂ ಸೂಚಿಸಿದರು.
ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ, ಅಹವಾಲು ಪರಿಹರಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…