ರಾಜ್ಯ

ಸೋಮಣ್ಣಗೆ ನರೇಂದ್ರ ಮೋದಿ ಅವರ ಮುಂದೆ ನಿಲ್ಲಲು ಧೈರ್ಯ ಇದೆಯೇ?: ಸಿಎಂ ಸಿದ್ದರಾಮಯ್ಯ

ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅವರು ಇಂದು (ಏ೧೪) ತುಮಕೂರು ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಮುದ್ಧುಹನುಮೇಗೌಡ ಅವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮ ಅಭ್ಯರ್ಥಿಯ ಪರ ಮತದಾರರಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸದಸ್ಯರು ಆಯ್ಕೆಯಾಗಿದ್ದರು. ಅದರಲ್ಲಿ ಬಸವರಾಜ್ ಕೂಡ ಒಬ್ಬರು ಈಗ ಸುಮಲತಾ ಅಂಬರೀಶ್ ಹಾಗು ಜೆಡಿಎಸ್ ನಿಂದ ಗೆದ್ದ ಪ್ರಜ್ವಲ್ ಗೌಡ ಸೇರಿ 27 ಜನ ಆಗಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗಿದೆ. ಬರಗಾಲ ಬಂದರೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಕರ್ನಾಟಕಕ್ಕೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ ಹಣವನ್ನೂ ಕೊಡಲಿಲ್ಲ. ಅವರೇ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಗೆ 5,300 ಕೋಟಿ ಕೊಡುತ್ತೇವೆ ಎಂದು ಒಂದು ರೂಪಾಯಿ ಕೊಡಲಿಲ್ಲ ಎಂದರು.

ಸೋಮಣ್ಣ ವಿರುದ್ಧ ಸಿಎಂ ಗುಡುಗು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಡಪಾಯಿ ಪುಟ್ಟರಂಗಶಟ್ಟಿ ಹಾಗೂ ನನ್ನ ವಿರುದ್ಧ ಸೋತ ಸೋಮಣ್ಣ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ನಿಲ್ಲಿಸಿದ್ದಾರೆ. ಸೋಮಣ್ಣ ವಸತಿ ಸಚಿವರಾಗಿದ್ದ ಸಂದರ್ಭದಲ್ಲಿ ಒಂದೇ ಒಂದು ಮನೆ ಬಡವರಿಗೆ ಹಂಚಿಕೆ ಮಾಡಿದ ನಿದರ್ಶನವಿದ್ದರೆ ಹೇಳಲಿ ನೋಡೋಣ. ಒಂದು ಮನೆ ಕೊಡಲಿಲ್ಲ. ನಮ್ಮ ಅವಧಿಯಲ್ಲಿ 14.46 ಲಕ್ಷ ಮನೆಗಳನ್ನು ಕಟ್ಟಿಸಿದ್ದೇವೆ. ಸೋಮಣ್ಣ ಒಂದೇ ಒಂದು ಮನೆ ಬಡವರಿಗೆ ಕಟ್ಟಿಸಿದ್ದ ನಿದರ್ಶನವಿದ್ದರೆ ಅದರ ದಾಖಲೆ ಬಡವರ ಮುಂದಿಟ್ಟು ಕೆಲಸಗಾರ ಎಂದು ಹೇಳಲಿ ಎಂದರು.

ಸೋಮಣ್ಣನವರನ್ನು ಲೋಕಸಭೆಗೆ ಕಳಿಸಿದರೆ, ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪ ಮಾಡುತ್ತಾರೆಯೇ, ನಿಮ್ಮ ಪರವಾಗಿ ಧ್ವನಿ ಎತ್ತುತ್ತಾರೆಯೇ , ನರೇಂದ್ರ ಮೋದಿ ಅವರ ಮುಂದೆ ನಿಲ್ಲಲು ಧೈರ್ಯ ಇದೆಯೇ? ಎಲ್ಲಾ ಸಂಸದರು ನರೇಂದ್ರ ಮೋದಿ ಯವರನ್ನು ಕಂಡರೆ ಗಡ ಗಡ ಎಂದು ನಡುಗುತ್ತಾರೆ. ಇಂಥವರನ್ನು ಲೋಕಸಭೆಗೆ ಕಳಿಸಿದರೆ ಸಮಸ್ಯಗೆ ಪರಿಹಾರ ಸಿಗುವುದೇ ಎಂದು ಪ್ರಶ್ನಿಸಿಕೊಳ್ಳಬೇಕು. 27 ಜನ ಸಂಸದರಿಂದ ಕರ್ನಾಟಕದ ಜನರ ಹಿತವನ್ನು ರಕ್ಷಿಸಲು ಸಾಧ್ಯವಿಲ್ಲ. ಅದಕ್ಕಾಗಿ ಸೋಮಣ್ಣ ಅವರನ್ನು ಯಾವ ಕಾರಣಕ್ಕೂ ಬೆಂಬಲಿಸಬಾರದು ಎಂದರು.

ಸಮಾನತೆ ಎಲ್ಲರಿಗೂ ದೊರಕಬೇಕು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವಾದ ಇಂದು ಅವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್ ಅವರು ಹೆಣ್ಣು ಮಕ್ಕಳ ಪ್ರಗತಿಯಾಗದೆ ಈ ಸಮಾಜದಲ್ಲಿ ಪ್ರಗತಿ ಸಾಧ್ಯವಿಲ್ಲ. ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಬೇಕು. ರೈತರಿಗೆ, ಹಿಂದುಳಿದವರಿಗೆ, ಅಸಮಾನತೆಯಿಂದ ನರಳುವ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದಾಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ. ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ನಮ್ಮ ದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಗೆ ಸರಿಹೊಂದುವ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಸ್ವಾತಂತ್ರ್ಯ, ಸಮಾನತೆ , ಭ್ರಾತೃತ್ವದ ತತ್ವಗಳನ್ನು ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ. ಸಮಾನತೆ ಎಲ್ಲರಿಗೂ ದೊರಕಬೇಕು. ಎಲ್ಲಾರೂ ಒಂದು ತಾಯಿಯ ಮಕ್ಕಳಂತೆ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇದನ್ನೇ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕೆಂದು ಹೇಳಿದ್ದರು ಎಂದರು.

ಸಮಾನತೆಯಲ್ಲಿ ನಂಬಿಕೆ ಇಟ್ಟವರು ಕಾಂಗ್ರೆಸ್ ಪಕ್ಷ. ಈ ದೇಶದ ಸಂಪತ್ತು, ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು. ಕೆಲವರ ಕೈಯಲ್ಲೇ ಅಧಿಕಾರವಿರಬಾರದು. ದೇಶದ ಅಧಿಕಾರ ಬಲಾಢ್ಯರ ಕೈಯಲ್ಲಿ ಸಿಲುಕಿದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ. ದೌರ್ಜನ್ಯ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ರಾಜಕೀಯ ಸ್ವಾತಂತ್ಯ ಸಿಕ್ಕರೆ ಸಾಲದು ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಮಸಾಮಾಜ ನಿರ್ಮಾಣ ಸಾಧ್ಯ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅವರ ಆದರ್ಶ, ತತ್ವ ಹಾಗೂ ಧ್ಯೇ ಯೋದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.

ನುಡಿದಂತೆ ನಡೆದಿದ್ದೇವೆನಾವು ಹಿಂದೆ ಅಧಿಕಾರದಲ್ಲಿದ್ದಾಗ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ಜೊತೆಗೆ 30 ಕಾರ್ಯಕ್ರಮಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ.

ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಅವುಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಮೂದಲಿಸಿದ್ದ ಪ್ರಧಾನಿ ಮೋದಿಯವರೇ ಇಂದು ಗ್ಯಾರಂಟಿ ಎಂಬ ಪದವನ್ನು ಕದ್ದಿದ್ದು, ಈಗ ಎಲ್ಲಿ ಭಾಷಣ ಮಾಡಿದರೂ ‘ಮೋದಿ ಗ್ಯಾರಂಟಿ’ ಎನ್ನುತ್ತಾರೆ ಎಂದರು.

ಪ್ರತಿ ಜನರ ಖಾತೆಗೆ 15 ಕೋಟಿ, 2 ಕೋಟಿ ಉದ್ಯೋಗ ಸೃಷ್ಟಿ ಭರವಸೆಗಳನ್ನು ಹುಸಿಗೊಳಿಸಿದ್ದು, ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಎಲ್ಲ ಪದಾರ್ಥಗಳ ಬೆಲೆಗಳು ಇಳಿದೇ ಇಲ್ಲ. ತಮ್ಮ ಹತ್ತು ವರ್ಷದ ಅಧಿಕಾರವಾಧಿಯಲ್ಲಿ ಜನರ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಮೋದಿಯವರಿಗೆ ಸಾಧ್ಯವಾಗದೇ, ಯಾವ ಮುಖವಿಟ್ಟುಕೊಂಡು ಜನರ ಬಳಿ ಓಟು ಕೇಳಲು ಬರುತ್ತೀರಿ ಎಂದು ಸಿಎಂ ಪ್ರಶ್ನಿಸಿದರು.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಮಾಜಿ ಶಾಸಕರು, ಷಡಕ್ಷರಿ, ವಾಸು, ರಾಜೇಂದ್ರ, ಮೊದಲಾದವರು ಉಪಸ್ಥಿರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ…

6 mins ago

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…

11 mins ago

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…

25 mins ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…

39 mins ago

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ…

1 hour ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು…

2 hours ago