Mysore
23
broken clouds

Social Media

ಶುಕ್ರವಾರ, 13 ಜೂನ್ 2025
Light
Dark

ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ : ಎಂ.ಪಿ ರೇಣುಕಾಚಾರ್ಯ

ಬೆಂಗಳೂರು : ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತನಾಡುತ್ತಿದ್ದಾರೆ. ನಾನು ಹೇಳುತ್ತಿಲ್ಲ, ಜನ ಹಾಗೆ ಹೇಳುತ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗುತ್ತಿದೆ ಎಂದರು.

ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ ಬಿಟ್ ಹೋಗಬಹುದು. ಮೋದಿಯವ್ರು ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ. ಮಧ್ಯದಲ್ಲಿ ಇರೋರು ಕೆಲವರು ಯಡಿಯೂರಪ್ಪ ಅವರನ್ನು ಕಡೆಗಣಿಸ್ತಿದ್ದಾರೆ ಎಂದರು.

ನಾನು ಯಡಿಯೂರಪ್ಪ ಗರಡಿಯಲ್ಲಿ ಬೆಳೆದವನು. ಬಿಜೆಪಿ ಬಿಡ್ತೇನೆ ಅಂತ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಸೇರುತ್ತೇನೆ ಅಂತ ಹೇಳಿಲ್ಲ. ಪಕ್ಷ ಕಟ್ಟೋಣ ಅಂತ ಯಡಿಯೂರಪ್ಪ ಹೇಳಿದ್ದಾರೆ. ನಾವು ಕಾದು ನೋಡುತ್ತೇವೆ. ಆದರೆ ಪಕ್ಷ ಬಿಡುವ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗರಂ ಆದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!