dk shivkumar
ಬೆಂಗಳೂರು: ನಾನು ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ಪಕ್ಷದ ವಕ್ತಾರರಿಂದ ಹೇಳಿಕೆ ಕೊಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ದಸರಾ ಕುರಿತು ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ನಾನು ಕೆಲವು ಸತ್ಯಗಳನ್ನು ಹೇಳಿದರೆ ಕೆಲವರು ಸಹಿಸುವುದಿಲ್ಲ. ಪ್ರಮೋದ ದೇವಿಯವರಾಗಲೀ, ಯದುವೀರ್ ಆಗಲೀ, ವಿಧಾನಸಭೆಯಲ್ಲಾಗಲೀ ನಾನು ಆಡುವ ಮಾತುಗಳಲ್ಲಿ ತಪ್ಪು ಕಂಡುಹಿಡಿಯುವುದೇ ದೊಡ್ಡ ಕೆಲಸವಾಗಿದೆ.
ನನ್ನ ವಿಚಾರವಾಗಿ ಏನೋ ನಡೆಯುತ್ತಿದೆ. ಅದಕ್ಕಾಗಿ ನಾನು ಮಾತನಾಡದೇ ಇರುವುದೇ ಉತ್ತಮ. ಪಕ್ಷದ ಬೇರೆ ನಾಯಕರು ಹಾಗೂ ವಕ್ತಾರರಿದ್ದಾರೆ. ಅವರಿಂದ ಮಾತನಾಡಿಸುವುದೇ ಸೂಕ್ತ ಎಂದರು.
ಡಿ.ಕೆ.ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ತೀವ್ರ ಸಂಚಲನ ಸೃಷ್ಟಿಸಿದ್ದು, ಭಾರೀ ವಿವಾದ ಮೂಡಿಸಿವೆ. ಧರ್ಮಸ್ಥಳದ ಕುರಿತಂತೆ ಎಸ್‍ಐಟಿ ತನಿಖೆ ಪ್ರಗತಿಯಲ್ಲಿರುವಾಗಲೇ ಡಿ.ಕೆ.ಶಿವಕುಮಾರ್ ಷಡ್ಯಂತ್ರ ನಡೆದಿದೆ ಎಂದು ಹೇಳಿ ತನಿಖೆಯ ದಿಕ್ಕನ್ನು ಬದಲಾಯಿಸಿದರು. ಚಾಮುಂಡೇಶ್ವರಿ ದೇವಸ್ಥಾನ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಹೇಳುವ ಮೂಲಕ ಮತ್ತಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದು ಬಿಜೆಪಿಯವರ ಕೆಂಗಣ್ಣಿಗೂ ಗುರಿಯಾಗಿದ್ದು ತೀಕ್ಷ್ಣ ಪ್ರತಿಕ್ರಿಯೆಗಳು ಕಂಡು ಬರುತ್ತಿವೆ.
ಈ ಸಂಬಂಧಪಟ್ಟಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ವಿಚಾರವಾಗಿ ಮಾತನಾಡದೆ ಇರುವುದೇ ಕ್ಷೇಮ ಎಂದು ಪ್ರತಿಕ್ರಿಯಿಸಿದ್ದಾರೆ. ದಸರಾ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅನಗತ್ಯ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬಂದಂತಿದೆ.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…