ಬೆಂಗಳೂರು : ನಗರದಲ್ಲಿ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಇನ್ನಷ್ಟು ಆಗಬೇಕಿದೆ. ಈಗ ಆಗಿರುವುದು ಶೇ60 ರಷ್ಟು ಮಾತ್ರ. ಆದ್ದರಿಂದ ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯರೆಡ್ಡಿ ಅವರ ಗೆಲುವು ಅತ್ಯಗತ್ಯ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಮನವಿ ಮಾಡಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…