ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿ ನೀರಿನ ಸಂಗ್ರಹದಲ್ಲೂ ಏರಿಕೆಯಾಗಿತ್ತು. ಈಗ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಒಳಹರಿವು ಕ್ಷೀಣಿಸತೊಡಗಿದೆ.
ರಾಜ್ಯದ ಒಳನಾಡಿನಲ್ಲಿ ಮಳೆ ಕೊರತೆ ಉಂಟಾಗಿ ಮುಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ಭಾರೀ ಹಿನ್ನಡೆ ಉಂಟಾಗಿದೆ. ಉತ್ತರ ಒಳನಾಡಿನ ಬಹಳಷ್ಟು ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಿದೆ. ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದ್ದು, ಬರದ ಛಾಯೆ ಜುಲೈನಲ್ಲೇ ಕಂಡು ಬರುತ್ತಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜುಲೈ ಒಂದರಿಂದ ಜು.10ರವರೆಗೆ ರಾಜ್ಯದಲ್ಲಿ ವಾಡಿಕೆ ಮಳೆಯಾಗಿದೆ. ಅಂದರೆ, ವಾಡಿಕೆಯ 84 ಮಿ.ಮೀ. ಮಳೆಗೆ 85 ಮಿ.ಮೀ.ನಷ್ಟು ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಆದರೆ, ದಕ್ಷಿಣ ಒಳನಾಡಿನಲ್ಲಿ ಶೇ.58ರಷ್ಟು ಹಾಗೂ ಉತ್ತರ ಒಳನಾಡಿನಲ್ಲಿ ಶೇ.6ರಷ್ಟು ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ 21 ಮಿ.ಮೀ.ಗೆ ಕೇವಲ 9 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ತೀವ್ರ ಮಳೆ ಕೊರತೆ ಎದುರಿಸುವಂತಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…