ಬೆಂಗಳೂರಿನ ಹಲವು ಮಾಲ್ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್‌ಗಳನ್ನು ಒಡೆದು ಹಾಕಿದ್ದರು.
ಅದರಲ್ಲಿಯೂ ಮಾಲ್ ಆಫ್ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್ ಕನ್ನಡ ಪರ ಹೋರಾಟಗಾರರ ಟಾರ್ಗೆಟ್ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್ 31 ) ಜನವರಿ 15ರವರೆಗೆ ಈ ಮಾಲ್ ಬಂದ್ ಮಾಡಲು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು. ಮಾಲ್ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್ ಮುಂದೆ ʼಮಾಲ್ ಕ್ಲೋಸ್ಡ್ʼ ಎಂಬ ಫಲಕ ಇಟ್ಟು ಬಾಗಿಲು ಬಂದ್ ಮಾಡಲಾಗಿತ್ತು.
ಈ ಕುರಿತು ಇದೀಗ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ರಿಟ್ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…