ಮಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಮುಂದೆಯೂ ಇದೇ ರೀತಿ ಮಾಡಿದ್ದಲ್ಲಿ ಅವರನ್ನು ವಜಾ ಮಾಡಲಾಗುತ್ತದೆ. ಬಳಿಕ ಕೋರ್ಟ್‌ನಲ್ಲಿ ನಿರ್ಧಾರವಾಗಲಿ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದರು.
ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಸದನದ ಗೌರವ ಉಳಿಸಬೇಕಾದರೆ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ. ಸ್ಪೀಕರ್ ಸದನದ ಸುಪ್ರೀಂ ಪವರ್. ಡಿಫಮೇಷನ್ ಕಾಯ್ದೆ ಬಲವಾಗಿದೆ. ಆದರೆ ಸ್ಪೀಕರ್ ಸ್ಥಾನದಲ್ಲಿ ಹಿಂದೆ ಕುಳಿತವರು ಬಲವಾಗಿದ್ದರೆ ಎಲ್ಲವೂ ಸರಿಯಾಗುತ್ತದೆ. ಹಿಂದೆ ಇಂತಹ ಘಟನೆಗಳು ನಡೆದಾಗ ಅಂದಿನ ಸ್ಪೀಕರ್ ಸ್ಥಾನದಲ್ಲಿದ್ದವರು ಸರಿಯಾಗಿ ಕ್ರಮ ಕೈಗೊಳ್ಳದಿದ್ದ ಕಾರಣ, ಮತ್ತೆ ಇಂತಹ ಘಟನೆಗಳು ಮರುಕಳಿಸುವಂತಾಗಿದೆ. ಅವರಿಗೆ ಧೈರ್ಯ ಇರಲಿಲ್ಲ ಹಾಗಾಗಿ ಆರು ತಿಂಗಳ ಅಮಾನತು ಮಾಡಿಲ್ಲ. ನನಗೆ ಧೈರ್ಯ ಇದೆ ನಾನು ಮಾಡಿದ್ದೇನೆ ಎಂದು ಹೇಳಿದರು.
ಧನ ವಿನಿಯೋಗ ಬಿಲ್ ಪಾಸ್ ಆಗುವಾಗ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ. ಅಂದಿನ ಘಟನೆ ಇಡೀ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಸಭಾಧ್ಯಕ್ಷ ಪೀಠದ ಗೌರವ ಉಳಿಸಿಕೊಳ್ಳಲು ಮಿತ್ರ ಶಾಸಕರನ್ನು ಆರು ತಿಂಗಳವರೆಗೆ ಅಮಾನತು ಮಾಡಿದ್ದೇನೆ. ಯಾರೂ ಅದನ್ನು ಶಿಕ್ಷೆಯೆಂದು ಪರಿಗಣಿಸುವುದು ಬೇಡ. ಉತ್ತಮವಾದ ಜನಪ್ರತಿನಿಧಿಯಾಗಲು ಕೈಗೊಂಡ ಕ್ರಮ ಇದು ಎಂದರು.
ಈ ಗಲಾಟೆಯ ಗೊಂದಲದಲ್ಲಿ ಧನ ವಿನಿಯೋಗ ಬಿಲ್ ಪಾಸ್ ಮಾಡದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ. ಬೇರೆ ಬಿಲ್ ರೀತಿಯಲ್ಲಿ ಅದನ್ನು ಮುಂದೆ ಹಾಕಲೂ ಸಾಧ್ಯವಿಲ್ಲ. ಆದರೆ, ಅವರಿಗೆ ಫೈನಾನ್ಸ್ ಬಿಲ್ ಪಾಸ್ ಆಗುವಾಗಲೇ ಗದ್ದಲ ಎಬ್ಬಿಸಿ, ನಿಲ್ಲಿಸುವ ಉದ್ದೇಶವಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಸ್ಪೀಕರ್ ಖಾದರ್ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…